LightBlog

Wednesday, September 9, 2026

ಶಿಕ್ಷಕರ ನೇಮಕಾತಿ: ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಲು ಅವಕಾಶ

 ಶಿಕ್ಷಕರ ನೇಮಕಾತಿ: ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಲು ಅವಕಾಶ





ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪಿಎಸ್‌ಟಿ-ಸಾಮಾನ್ಯ, ಶಿಕ್ಷಕ (1ರಿಂದ 5ನೇ ತರಗತಿ), ಪಿಇ-ಗ್ರೇಡ್-1 (1ರಿಂದ 8ನೇ), ಜಿಪಿಟಿ (6-8ನೇ), ಸಿಎಸ್‌ಟಿ (1-8ನೇ) ಹುದ್ದೆಗಳಿಗೆ ಹಾಗೂ ಸರಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹಶಿಕ್ಷಕ (ಎಎಂ) ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಗಳ ನೇಮಕಾತಿಗೆ ಜಿಲ್ಲಾ/ವಿಭಾಗವಾರು ಅಧಿಸೂಚನೆ ಹೊರಡಿಸಲಾಗಿತ್ತು.

ಆ ಅಧಿಸೂಚನೆಗಳಲ್ಲಿ, ಪ್ರವರ್ಗ 2ಎ, 2ಬಿ, 3ಎ, 3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ನಮೂನೆ-ಎಫ್‌ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಬೇಕು ಎಂದು ತಿಳಿಸಲಾಗಿತ್ತು. ಆದರೆ, ವಿವಾಹಿತ ಮಹಿಳಾ/ಪುರುಷ ಅಭ್ಯರ್ಥಿಗಳು ಈ ಪ್ರಮಾಣಪತ್ರ ಸಲ್ಲಿಸುವ ಬಗ್ಗೆ ಸ್ಪಷ್ಟೀಕರಣ ಕೇಳಿದ್ದರು.

ಅದಕ್ಕೆ ಅನುಗುಣವಾಗಿ, ಆಯಾ ಜಿಲ್ಲಾ/ವಿಭಾಗವಾರು ಅಧಿಸೂಚನೆಗಳಿಗೆ ಸ್ಪಷ್ಟೀಕರಣ ನೀಡುವ ಸೇರ್ಪಡೆ ಅಧಿಸೂಚನೆಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಹೊರಡಿಸಲಾಗಿದೆ. ಈ ಸೇರ್ಪಡೆ ಅಧಿಸೂಚನೆಗಳನ್ನು ಇಲಾಖೆಯ ವೆಬ್‌ಸೈಟ್ https://schooleducation.karnataka.gov.in/cacell/en ನಲ್ಲೂ ಪ್ರಕಟಿಸಲಾಗಿದೆ.

ಇತರ ಹಿಂದುಳಿದ ವರ್ಗಗಳಾದ ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ವಿವಾಹಿತ ಮಹಿಳಾ/ಪುರುಷ ಅಭ್ಯರ್ಥಿಗಳು, ಸೇರ್ಪಡೆ ಅಧಿಸೂಚನೆಯಂತೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಲಗತ್ತಿಸದೆ ಆನ್‌ಲೈನ್ ಅರ್ಜಿ ಸಲ್ಲಿಸಿದ್ದರೆ, ಅಂಥವರು ಈಗ ಹೊಸದಾಗಿ ಆ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಲು ಆನ್‌ಲೈನ್ ಅರ್ಜಿಯಲ್ಲಿ ಎಡಿಟ್ ಮಾಡುವ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಮತ್ತು ಪಾವತಿಸಿದ ಶುಲ್ಕ ಇತ್ಯರ್ಥಪಡಿಸಿಕೊಳ್ಳಲು ಸೆಪ್ಟೆಂಬರ್ 28ರವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಎಡಿಟ್ ಆಯ್ಕೆ ಬಳಸಿ, ನಿಯಮದಂತೆ ತಮ್ಮ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡಬೇಕು. ಬೇರೆ ಮಾಹಿತಿಯಲ್ಲಿ ತಿದ್ದುಪಡಿ ಇದ್ದರೂ ಅದನ್ನು ನವೀಕರಿಸಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಇ-ಮೇಲ್: cackarnataka1@gmail.com. ಈ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


No comments:

Post a Comment

LightBlog